ADVERTISEMENT

ಸ್ವಿಸ್‌ ಬ್ಯಾಂಕ್‌: ಕಪ್ಪು ಹಣ ಇಟ್ಟಿರುವ ಭಾರತೀಯರ ಪಟ್ಟಿ ತಯಾರಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2014, 10:13 IST
Last Updated 22 ಜೂನ್ 2014, 10:13 IST

ಜ್ಯೂರಿಚ್‌ (ಪಿಟಿಐ):  ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಿಟ್ಜರ್‌ಲೆಂಡ್‌ ಬ್ಯಾಂಕ್‌ಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣದ  ವಿವರವನ್ನು ಕಲೆ ಹಾಕುತ್ತಿರುವುದಾಗಿ ಸ್ವಿಸ್‌ ಸರ್ಕಾರ ಭಾನುವಾರ ತಿಳಿಸಿದೆ.

ತೆರಿಗೆ ರಹಿತ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಟ್ಟಿರುವ  ಭಾರತೀಯರ ಪಟ್ಟಿ ತಯಾರಿಸಲಾಗುತ್ತಿದ್ದು ಇದನ್ನು ಭಾರತ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಸ್ವಿಸ್‌ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿನ ಬ್ಯಾಂಕ್‌ಗಳಲ್ಲಿ ಹಣ ಇಟ್ಟಿರುವ ಖಾತೆದಾರರ ತಪಾಸಣಾ ಕಾರ್ಯ ನಡೆಯುತ್ತಿದೆ. ಬೇನಾಮಿ ಹೆಸರಿನಲ್ಲಿ ಹಣ ಇಟ್ಟಿರುವವರ ಬಗ್ಗೆಯು ಪರೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಹಣ ಇಟ್ಟಿರುವ ಭಾರತೀಯರ ಬಗ್ಗೆ ಅವರು ಯಾವುದೇ ಮಾಹಿತಿ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT