ADVERTISEMENT

ಹಿಮಾಚಲದಲ್ಲಿ ‘ವಾಟರ್‌ ಎಟಿಎಂ’

​ಪ್ರಜಾವಾಣಿ ವಾರ್ತೆ
Published 28 ಜುಲೈ 2014, 19:30 IST
Last Updated 28 ಜುಲೈ 2014, 19:30 IST

ಶಿಮ್ಲಾ (ಐಎಎನ್‌ಎಸ್‌): ಕೇವಲ 50 ಪೈಸೆಗೆ ಒಂದು ಲೀಟರ್‌ ಶುದ್ಧ ಕುಡಿಯುವ ನೀರು ಪೂರೈಸುವ ‘ವಾಟರ್‌ ಎಟಿಎಂ’ಗಳನ್ನು ಹಿಮಾಚಲ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ. ರಾಜಧಾನಿ ಶಿಮ್ಲಾದ ಕೆಲವು ಭಾಗಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಿರುವ ‘ವಾಟರ್‌ ಎಟಿಎಂ’ ವ್ಯವಸ್ಥೆಗೆ ಮುಖ್ಯಮಂತ್ರಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಸೋಮವಾರ ಚಾಲನೆ ನೀಡಿದರು.

ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶದಿಂದ ಸರ್ಕಾರೇತರ ಸಂಸ್ಥೆ ‘ಪಿರಮಲ್‌ ಸರ್ವಜಲ್‌’ ಈ ವಾಟರ್‌ ಎಟಿಎಂ’ ಯಂತ್ರಗಳನ್ನು ಅಳವಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT