ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಅನಾರೋಗ್ಯದ ಕಾರಣ ತಮ್ಮ ಹುಟ್ಟುಹಬ್ಬ ಆಚರಿಸದಿರುವಂತೆ ನಟ ಕಮಲ್ ಹಾಸನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನ. 7ರಂದು ಅವರು 64ನೇ ವರ್ಷಕ್ಕೆ ಕಾಲಿಡಲಿದ್ದಾರೆ.
ಈ ಮಧ್ಯೆ ಜಯಲಲಿತಾ ಅವರ ಆರೋಗ್ಯ ಸುಧಾರಿಸುತ್ತಿದ್ದು, ಅವರು ಮಾತನಾಡಲು ಆರಂಭಿಸಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.