ADVERTISEMENT

ಹುತಾತ್ಮ ಯೋಧರ ಮಕ್ಕಳ ಸಂಪೂರ್ಣ ಶಿಕ್ಷಣ ವೆಚ್ಚ ಭರಿಸಲಿದೆ ಸರ್ಕಾರ

ಏಜೆನ್ಸೀಸ್
Published 22 ಮಾರ್ಚ್ 2018, 11:29 IST
Last Updated 22 ಮಾರ್ಚ್ 2018, 11:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹುತಾತ್ಮ ಯೋಧರ ಮಕ್ಕಳ ಸಂಪೂರ್ಣ ಶಿಕ್ಷಣ ವೆಚ್ಚವನ್ನು ಇನ್ನು ಕೇಂದ್ರ ಸರ್ಕಾರವೇ ಭರಿಸಲಿದೆ.

ಹುತಾತ್ಮ ಯೋಧರ ಮಕ್ಕಳ ಶಿಕ್ಷಣಕ್ಕೆ ನಿಗದಿಪಡಿಸಲಾಗಿದ್ದ ಮಾಸಿಕ ₹ 10 ಸಾವಿರದ ಮಿತಿಯನ್ನು ಹಣಕಾಸು ಸಚಿವಾಲಯ ತೆಗೆದುಹಾಕಿದ್ದು, ಈ ಕುರಿತು ಬುಧವಾರ ಅಧಿಸೂಚನೆ ಹೊರಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ನಡೆಸುವವರಿಗೆ ನಿಯಮ ಅನ್ವಯವಾಗಲಿದೆ.

ADVERTISEMENT

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವವರಿಗೂ ನಿಯಮ ಅನ್ವಯವಾಗಲಿದೆ.

ಹುತಾತ್ಮ ಯೋಧರ ಮಕ್ಕಳ ಶಿಕ್ಷಣಕ್ಕೆ ನೀಡುವ ಮೊತ್ತ ತಿಂಗಳಿಗೆ ₹ 10 ಸಾವಿರ ಮೀರಬಾರದು ಎಂದು ಕಳೆದ ವರ್ಷ ಜುಲೈನಲ್ಲಿ ಹಣಕಾಸು ಸಚಿವಾಲಯ ಹೇಳಿತ್ತು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ಈ ಮಿತಿಯನ್ನು ತೆರವುಗೊಳಿಸುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವಾಲಯಕ್ಕೆ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.