ADVERTISEMENT

ಹೆಸರು ಹಿಂಪಡೆಯುವಂತೆ ಸುಬ್ರಮಣಿಯಂ ಮನವಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2014, 10:21 IST
Last Updated 25 ಜೂನ್ 2014, 10:21 IST

ನವದೆಹಲಿ (ಪಿಟಿಐ): ಸುಪ್ರಿಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿರುವ ತಮ್ಮ ಹೆಸರನ್ನು ಹಿಂದಕ್ಕೆ ಪಡೆಯಬೇಕು ಎಂದು ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ ಅವರು ಬುಧವಾರ ಸುಪ್ರಿಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಸುಬ್ರಮಣಿಯಂ ಅವರು ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ನೇತೃತ್ವದ ನ್ಯಾಯಾಧೀಶರ ನೇಮಕ ಸಮಿತಿಗೆ ಪತ್ರವೊಂದನ್ನು ಬರೆದಿದ್ದಾರೆ ಎಂದು ಸುಬ್ರಮಣಿಯಂ ಅವರ ಕಚೇರಿ ಮೂಲಗಳು ತಿಳಿಸಿವೆ.

ಈ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸಾಲಿಸಿಟರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದ ಸುಬ್ರಮಣಿಯಂ ಅವರ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ ಲೋಧಾ ನೇತೃತ್ವದ ನ್ಯಾಯಾಧೀಶರ ನೇಮಕ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.

ಆದರೆ, ಕೋಲ್ಕತ್ತ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅರುಣ್‌ ಮಿಶ್ರಾ, ಒಡಿಶಾ ಹೈಕೋರ್ಟ್‌ ಮುಖ್ಯ ನ್ಯಾಯ­ಮೂರ್ತಿ ಆದರ್ಶ್‌ ಕುಮಾರ್‌ ಗೊಯಲ್‌, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ರೋಹಿಂಟನ್‌  ನಾರಿ­ಮನ್‌ ಅವರ ಹೆಸರುಗಳಿಗೆ ಒಪ್ಪಿಗೆ ಸೂಚಿಸಿದ ಸರ್ಕಾರ ಸುಬ್ರಮಣಿಯಂ ಅವರ ಹೆಸರನ್ನು ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT