ADVERTISEMENT

‘ಲೈಂಗಿಕ ಅಲ್ಪಸಂಖ್ಯಾತರಿಗೂ ಕುಟುಂಬದ ಮುಖ್ಯಸ್ಥ ಸ್ಥಾನ’

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2015, 19:30 IST
Last Updated 19 ಏಪ್ರಿಲ್ 2015, 19:30 IST

ಲಖನೌ(ಪಿಟಿಐ): ಲೈಂಗಿಕ ಅಲ್ಪಸಂಖ್ಯಾತರಿಗೂ ಕುಟುಂಬದಲ್ಲಿ ಮುಖ್ಯಸ್ಥರ (ಯಜಮಾನ) ಸ್ಥಾನಮಾನ ಹೊಂದುವ ಹಕ್ಕಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಲೈಂಗಿಕ ಅಲ್ಪಸಂಖ್ಯಾತರಿಗೆ ತಾರತಮ್ಯ ಮಾಡುವಂತಿಲ್ಲ. ಆಹಾರ ಭದ್ರತಾ ಕಾಯ್ದೆಯಡಿ ಅವರಿಗೂ ಪಡಿತರ ಚೀಟಿ ನೀಡುವ ಮೂಲಕ ಆಹಾರ ಧಾನ್ಯಗಳನ್ನು ವಿತರಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕಲ್ಪಿಸುವುದು ಮೊದಲ ಆದ್ಯತೆಯಾಗಬೇಕು ಎಂದು ನ್ಯಾಯಾಲಯ ಒತ್ತಿಹೇಳಿದೆ.

ಪಡಿತರ ಚೀಟಿಯ ಕಾಲಂನಲ್ಲಿ ಪುರುಷರು, ಸ್ತ್ರೀಯರು ಎಂದು ಪ್ರಸ್ತಾಪಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಹೀಗಾಗಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಸಾರ್ವಜನಿಕ  ಹಿತಾಸಕ್ತಿ ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ವಿಭಾಗೀಯ ಪೀಠ, ಲೈಂಗಿಕ ಅಲ್ಪಸಂಖ್ಯಾತರಿಗೂ ಪಡಿತರ ಚೀಟಿ, ಆಹಾರ ಧಾನ್ಯಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.