ADVERTISEMENT

‘ವಿ.ಪಕ್ಷದ ನಾಯಕತ್ವ ನಮಗೆ ಸಿಗಬೇಕು’

​ಪ್ರಜಾವಾಣಿ ವಾರ್ತೆ
Published 7 ಜುಲೈ 2014, 13:21 IST
Last Updated 7 ಜುಲೈ 2014, 13:21 IST

ನವದೆಹಲಿ (ಪಿಟಿಐ): ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನಮಾನ ಕುರಿತು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಕಾಂಗ್ರೆಸ್‌ ಏಕೈಕ ದೊಡ್ಡ ಪಕ್ಷವಾಗಿದೆ ಎಂದು ಪ್ರತಿಪಾದಿಸಿರುವ ಅವರು, ಲೋಕಸಭೆಯ ವಿರೋಧಪಕ್ಷದ ನಾಯಕನ ಸ್ಥಾನ ತಮ್ಮ ಪಕ್ಷಕ್ಕೆ  ಸಿಗಬೇಕು ಎಂದಿದ್ದಾರೆ.

‘ಬಿಜೆಪಿ ಬಳಿಕ ನಮ್ಮದು ಏಕೈಕ ದೊಡ್ಡ ಪಕ್ಷ. ಚುನಾವಣಾ ಪೂರ್ವ ಮೈತ್ರಿಯೂ ಇತ್ತು. ಆದ್ದರಿಂದ ನಮಗೆ ಲೋಕಸಭೆಯ ವಿರೋಧ ಪಕ್ಷದ ನಾಯಕನ ಪಟ್ಟ ಸಿಗಬೇಕು’ ಎಂದು ಸೋನಿಯಾ ಅವರು ಅಭಿಪ್ರಾಯ ಪಟ್ಟಿದ್ದಾರೆ.

ADVERTISEMENT

ಆದರೆ ಈ ಸಂಬಂಧ ಕಾನೂನು ಹೋರಾಟ ನಡೆಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.