ADVERTISEMENT

12 ಮಂದಿ ಶಂಕಿತ ಉಗ್ರರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಮೇ 2016, 6:24 IST
Last Updated 4 ಮೇ 2016, 6:24 IST
12 ಮಂದಿ ಶಂಕಿತ ಉಗ್ರರ ಬಂಧನ
12 ಮಂದಿ ಶಂಕಿತ ಉಗ್ರರ ಬಂಧನ   

ನವದೆಹಲಿ (ಏಜೆನ್ಸೀಸ್‌): ದೆಹಲಿಯಲ್ಲಿ ದಾಳಿಗೆ ಸಂಚು ರೂಪಿಸಿದ್ದ ಆರೋಪದ ಮೇಲೆ 12 ಮಂದಿ ಶಂಕಿತ ಉಗ್ರರನ್ನು ವಿಶೇಷ ಪೊಲೀಸ್‌ ಪಡೆ ಬಂಧಿಸಿದೆ.

ಬಂಧಿತರು ಜೈಷ್‌–ಎ–ಮೊಹಮ್ಮದ್‌ ಸಂಘಟನೆಗೆ ಸೇರಿದವರೆಂದು ಪೊಲೀಸರು ಶಂಕಿಸಿದ್ದಾರೆ.

ಕೇಂದ್ರೀಯ ಗುಪ್ತಚರ ದಳ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ADVERTISEMENT

ಬಂಧಿತರಿಂದ ಸುಧಾರಿತ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.