ADVERTISEMENT

14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್‌ ಪ್ರಮಾಣವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 25 ಜುಲೈ 2017, 11:30 IST
Last Updated 25 ಜುಲೈ 2017, 11:30 IST
ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.   

ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್‌ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.

ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಮಧ್ಯಾಹ್ನ 12.15ಕ್ಕೆ ನಡೆದ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕರಿಸಿದ ರಾಮನಾಥ ಕೋವಿಂದ್‌ ಅವರಿಗೆ ನಿರ್ಗಮಿತ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಹಸ್ತಲಾಘವ ಮಾಡಿ, ರಾಷ್ಟ್ರಪತಿ ಸ್ಥಾನ ಅಲಂಕರಿಸುವಂತೆ ಸ್ಥಾನ ಬದಲಾಯಿಸಿಕೊಂಡರು.

ADVERTISEMENT

ರಾಮನಾಥ ಕೋವಿಂದ್‌ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಸತ್‌ ಆವರಣದಲ್ಲಿ 21 ಸುತ್ತು ಗುಂಡು ಹಾರಿಸಿ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಇದಕ್ಕೂ ಮೊದಲು ಕೋವಿಂದ್‌ ಅವರು ನಿರ್ಗಮಿತ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರೊಂದಿಗೆ ರಾಷ್ಟ್ರಪತಿ ಭವನದಿಂದ ಮೆರವಣಿಗೆಯಲ್ಲಿ ಸಂಸತ್‌ ಭವನಕ್ಕೆ ಬಂದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಮನಾಥ ಕೋವಿಂದ್‌ ಅವರು ಸಹಿ ಹಾಕಿದರು.

ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಸ್ವಾಗತಿಸಿ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ಗೆ ಕರೆ ತರಲಾಯಿತು. ರಾಷ್ಟ್ರಗೀತೆ ಹಾಡುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.

ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನ ರಾಮನಾಥ ಕೋವಿಂದ್‌ ಅವರು ಬೆಳಿಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.