ADVERTISEMENT

18 ಒಪ್ಪಂದಗಳಿಗೆ ಮೋದಿ–ಮರ್ಕೆಲ್‌ ಸಹಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2015, 12:42 IST
Last Updated 5 ಅಕ್ಟೋಬರ್ 2015, 12:42 IST

ನವದೆಹಲಿ (ಪಿಟಿಐ): ಜರ್ಮನಿಯ ಚಾನ್ಸೆಲರ್‌ ಏಂಜೆಲಾ ಮರ್ಕೆಲ್‌  ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ 18 ಒಪ್ಪಂದಗಳಿಗೆ ಸೋಮವಾರ ಸಹಿ ಹಾಕಿದ್ದಾರೆ.

ಏಂಜೆಲಾ ಮರ್ಕೆಲ್‌ ಅವರು ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಮರ್ಕೆಲ್‌, ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ಇದೇ ವೇಳೆ ಪ್ರಮುಖ 18 ಒಪ್ಪಂದಗಳಿಗೆ ಸಹಿ ಹಾಕಿದರು.

ಉಭಯ ದೇಶಗಳ ನಡುವೆ ಶಿಕ್ಷಣ, ಆರೋಗ್ಯ, ನಾಗರಿಕ ವಿಮಾನಯಾನ, ವಿಜ್ಞಾನ, ತಂತ್ರಜ್ಞಾನ, ಆಹಾರ, ಪರಿಸರ, ಉನ್ನತ ಶಿಕ್ಷಣ ಸೇರಿದಂತೆ ಹಲವು ಸಹಕಾರಗಳ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದೇ ಸಂದರ್ಭದಲ್ಲಿ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವಕ್ಕೆ ಜರ್ಮನಿ ಬೆಂಬಲ ಸೂಚಿಸುವ ಕುರಿತಂತೆ ಚರ್ಚಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.