ನವದೆಹಲಿ (ಪಿಟಿಐ): ಸುಮಾರು ರೂ. 5.5 ಕೋಟಿ ಮೌಲ್ಯದ 19.5 ಕೆ.ಜಿ. ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಗೋವಾ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ಈ ಸಂಬಂಧ ಏರ್ ಇಂಡಿಯಾ ಸಿಬ್ಬಂದಿ ಪ್ರಕಾಶ್ ಎಂ ಮನೋತ್ಗಿ (30) ಹಾಗೂ ಪ್ರಯಾಣಿಕರಾದ ಎ.ಮೊಹಮದ್, ಐ.ಹುಸೇನ್, ಎಂ.ಮೊಹಮದ್ ಎಂಬುವವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತ ಪ್ರಯಾಣಿಕರು ಕರ್ನಾಟಕ ಮತ್ತು ಮಹಾರಾಷ್ಟ್ರ ಮೂಲದವರು ಎನ್ನಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.