ADVERTISEMENT

₹35 ಕೋಟಿ ಮೌಲ್ಯದ ಅಫೀಮು ವಶ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2017, 19:30 IST
Last Updated 18 ಫೆಬ್ರುವರಿ 2017, 19:30 IST

ಅಮೃತಸರ:  ಗಡಿ ಭದ್ರತಾ ಪಡೆ(ಬಿಎಸ್‌ಎಫ್‌) ಸಿಬ್ಬಂದಿ ಭಾರತ– ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಕಾಕರ್‌ ಠಾಣೆ ಸಮೀಪ  ₹35ಕೋಟಿ ಮೌಲ್ಯದ  7ಕೆ.ಜಿ. ಅಫೀಮು ವಶಪಡಿಸಿಕೊಂಡಿದ್ದಾರೆ.
ನಿರ್ದಿಷ್ಟ ಮಾಹಿತಿಯನ್ನು ಆಧರಿಸಿ ಬಿಎಸ್‌ಎಫ್‌ ಹಾಗೂ ಮಾದಕ ವಸ್ತು ನಿಯಂತ್ರಣ ದಳ(ಎನ್‌ಸಿಬಿ) ಶುಕ್ರವಾರ ರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿದೆ ಎಂದು ಬಿಎಸ್‌ಎಫ್‌ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.