ADVERTISEMENT

ಸಂಶೋಧನೆಗೆ ಮಾರ್ಗದರ್ಶನ: ವಿದ್ಯಾರ್ಥಿಗಳ ಸಂಖ್ಯೆಗೆ ಮಿತಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2018, 19:30 IST
Last Updated 3 ಜನವರಿ 2018, 19:30 IST

ನವದೆಹಲಿ: ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಬೋಧಕರು ಮಾರ್ಗದರ್ಶನ ಮಾಡಬಹುದಾದ ಸಂಶೋಧನಾ ವಿದ್ಯಾರ್ಥಿಗಳ ಸಂಖ್ಯೆ ಮೇಲೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮಿತಿ ಹೇರಿದೆ.

ಪರಿಷ್ಕೃತ ನಿಯಮಗಳ ಪ್ರಕಾರ, ಏಕಕಾಲಕ್ಕೆ ಗರಿಷ್ಠ ನಾಲ್ವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲು ಮಾತ್ರ ಪ್ರಾಧ್ಯಾಪಕರಿಗೆ ಅವಕಾಶ ಇದೆ. ಸಹಾಯಕ ಪ್ರಾಧ್ಯಾಪಕರು ಇಬ್ಬರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬಹುದು.

ಎಐಸಿಟಿಇಯು ಇದೇ ಮೊದಲ ಬಾರಿಗೆ ಇಂತಹ ಮಿತಿ ನಿಗದಿ ಪಡಿಸಿದೆ. ಹೊಸ ನಿಯಮವು ಎಲ್ಲ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2018–19ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.