ADVERTISEMENT

ಮದರಸಾಗಳನ್ನು ಮುಚ್ಚುವುದು ಪರಿಹಾರವಲ್ಲ, ಆಧುನಿಕ ಶಿಕ್ಷಣ ನೀಡಬೇಕು: ಆದಿತ್ಯನಾಥ್

ಏಜೆನ್ಸೀಸ್
Published 18 ಜನವರಿ 2018, 11:37 IST
Last Updated 18 ಜನವರಿ 2018, 11:37 IST
ಯೋಗಿ ಆದಿತ್ಯನಾಥ್ (ಸಂಗ್ರಹ ಚಿತ್ರ)
ಯೋಗಿ ಆದಿತ್ಯನಾಥ್ (ಸಂಗ್ರಹ ಚಿತ್ರ)   

ಲಖನೌ: ಮದರಸಾಗಳನ್ನು ಮುಚ್ಚುವುದು ಸಮಸ್ಯೆಗೆ ಪರಿಹಾರವಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

‘ಮದರಸಾಗಳನ್ನು ಮುಚ್ಚುವುದರಿಂದ ಯಾವ ಪರಿಹಾರವೂ ಸಾಧ್ಯವಿಲ್ಲ. ಸಾಂಪ್ರದಾಯಿಕ ಶಿಕ್ಷಣ ಒದಗಿಸುವ ಜೊತೆಗೆ ಮದರಸಾಗಳು ಹಾಗೂ ಸಂಸ್ಕೃತ ಶಾಲೆಗಳು ಕಂಪ್ಯೂಟರ್, ಇಂಗ್ಲಿಷ್, ವಿಜ್ಞಾನ ಹಾಗೂ ಗಣಿತ ಶಿಕ್ಷಣವನ್ನೂ ನೀಡಬೇಕು’ ಎಂದು ಗುರುವಾರ ನಡೆದ ಒಂಬತ್ತು ರಾಜ್ಯಗಳ ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಸಮನ್ವಯ ಸಭೆಯಲ್ಲಿ ಅವರು ಹೇಳಿದ್ದಾರೆ.

ಮದರಸಾಗಳನ್ನು ಮುಚ್ಚಬೇಕು ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸಿಮ್ ರಿಜ್ವಿ ಅವರು ಆದಿತ್ಯನಾಥ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ADVERTISEMENT

‘ದಾರಿ ತಪ್ಪುತ್ತಿರುವ ಯುವಶಕ್ತಿಯನ್ನು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸದ್ಬಳಕೆ ಮಾಡಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ. ಗುಣಮಟ್ಟದ ಶಿಕ್ಷಣವೊಂದೇ ಪರಿಹಾರ ಮಾರ್ಗ. ತಾರತಮ್ಯ ರಹಿತ ಅಭಿವೃದ್ಧಿ ಯೋಜನೆ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಅವರು ಹೇಳಿದರು. ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಸಹ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.