ADVERTISEMENT

ಮಧ್ಯಪ್ರದೇಶದ ರಾಜ್ಯಪಾಲರಾಗಿ ಆನಂದಿಬೆನ್ ನೇಮಕ

ಏಜೆನ್ಸೀಸ್
Published 20 ಜನವರಿ 2018, 8:27 IST
Last Updated 20 ಜನವರಿ 2018, 8:27 IST
ಮಧ್ಯಪ್ರದೇಶದ ರಾಜ್ಯಪಾಲರಾಗಿ ಆನಂದಿಬೆನ್ ನೇಮಕ
ಮಧ್ಯಪ್ರದೇಶದ ರಾಜ್ಯಪಾಲರಾಗಿ ಆನಂದಿಬೆನ್ ನೇಮಕ   

ನವದೆಹಲಿ: ಗುಜರಾತಿನ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಶುಕ್ರವಾರ ಮಧ್ಯಪ್ರದೇಶದ ಮೊದಲ ಮಹಿಳಾ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ರಾಷ್ಟ್ರಪತಿ ಅವರು ಆನಂದಿಬೆನ್ ಅವರನ್ನು ಮಧ್ಯಪ್ರದೇಶದ ಮೊದಲ ಮಹಿಳಾ ರಾಜ್ಯಪಾಲರಾಗಿ ನೇಮಕ ಮಾಡಿದ್ದಾರೆ ಎಂದು  ರಾಷ್ಟ್ರಪತಿ ಭವನ ಅಧಿಕೃತ ಟ್ವೀಟ್‌ನಲ್ಲಿ ತಿಳಿಸಿದೆ.

ಗುಜರಾತಿನ ಬಿಜೆಪಿ ವಕ್ತಾರ ಭರತ್ ಪಾಂಡ್ಯ ಸಂತಸ ವ್ಯಕ್ತಪಡಿಸಿದ್ದು, ‘ಆನಂದಿಬೆನ್ ಅವರು ಮೊದಲ ಮಹಿಳಾ ರಾಜ್ಯಪಾಲರಾಗಿ ನೇಮಕವಾಗಿರುವುದು ಗುಜರಾತಿನ ಹೆಮ್ಮೆಯ ವಿಷಯ’ ಎಂದು ಹೇಳಿದ್ದಾರೆ.

ADVERTISEMENT

‘ಆನಂದಿಬೆನ್ ರೈತನ ಮಗಳು. ಗುಜರಾತಿನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದರು. ಇದೀಗ ಮಧ್ಯಪ್ರದೇಶದ ಮೊದಲ ಮಹಿಳಾ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಇದು ಗುಜರಾತಿಗೆ ಹೆಮ್ಮೆ ಎನಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.