ADVERTISEMENT

ಸಂಸತ್‌ನಲ್ಲಿ ಪ್ರಧಾನಿ ಮೋದಿ ಪ್ರತಿಪಾದಿಸಿದ ವಿಷಯಗಳ ವಾಸ್ತವಾಂಶ: ಇಲ್ಲಿದೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 10:13 IST
Last Updated 8 ಫೆಬ್ರುವರಿ 2018, 10:13 IST
ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಭಾಷಣ (ಪಿಟಿಐ ಚಿತ್ರ)
ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಭಾಷಣ (ಪಿಟಿಐ ಚಿತ್ರ)   

ನವದೆಹಲಿ: ಸ್ವಾತಂತ್ರ್ಯಾನಂತರ ಸುದೀರ್ಘ ಅವಧಿ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷದ ತಪ್ಪು ನೀತಿಗಳಿಂದಾಗಿ ದೇಶ ಕಷ್ಟ ಅನುಭವಿಸುವಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಸಭೆಯಲ್ಲಿ ಹೇಳಿದ್ದರು. ಅಲ್ಲದೆ ಬ್ಯಾಂಕ್‌ಗಳ ಬಿಕ್ಕಟ್ಟು, ಈಶಾನ್ಯ ರಾಜ್ಯಗಳ ಅಭಿವೃದ್ಧಿ, ಬೀದರ್–ಕಲಬುರ್ಗಿ ರೈಲು ಹಳಿ ಯೋಜನೆ, ಕಾಶ್ಮೀರ ವಿವಾದ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದರು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

ಮೋದಿ ಪ್ರತಿಪಾದಿಸಿದ ವಿಷಯಗಳ ವಾಸ್ತವಾಂಶದ ಬಗ್ಗೆ ದಿ ಕ್ವಿಂಟ್ ವೆಬ್‌ಸೈಟ್ ಪರಿಶೀಲನೆ ನಡೆಸಿದ್ದು, ಅಂಕಿಅಂಶ ಸಹಿತ ವರದಿ ಮಾಡಿದೆ.

ಸುಮಾರು 90 ನಿಮಿಷ ಲೋಕಸಭೆಯಲ್ಲಿ ಮಾತನಾಡಿದ್ದ ಮೋದಿ, ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿ ಮಾಡಬೇಕಿದೆ. ಹೀಗಾಗಿ ಹೆಚ್ಚು ಸಂಪನ್ಮೂಲಗಳನ್ನು ಅಲ್ಲಿಗೆ ಮೀಸಲಿಡಲಾಗಿದೆ ಎಂದು ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.