ADVERTISEMENT

7ನೇ ವೇತನ ಆಯೋಗದ ಶಿಫಾರಸಿಗೆ ಸಂಪುಟ ಅಸ್ತು

ಒಟ್ಟಾರೆ ವೇತನ ಶೇಕಡ 23.5ರಷ್ಟು ಏರಿಕೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2016, 7:11 IST
Last Updated 29 ಜೂನ್ 2016, 7:11 IST
7ನೇ ವೇತನ ಆಯೋಗದ ಶಿಫಾರಸಿಗೆ ಸಂಪುಟ ಅಸ್ತು
7ನೇ ವೇತನ ಆಯೋಗದ ಶಿಫಾರಸಿಗೆ ಸಂಪುಟ ಅಸ್ತು   

ನವದೆಹಲಿ (ಪಿಟಿಐ): ಏಳನೇ ವೇತನ ಆಯೋಗದ ಶಿಫಾರಸಿಗೆ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಇದರಿಂದ ಕೇಂದ್ರ ಸರ್ಕಾರಿ ನೌಕರರ ಒಟ್ಟಾರೆ ವೇತನ ಶೇಕಡ 23.5ರಷ್ಟು ಏರಿಕೆಯಾಗಲಿದೆ.

ಆಯೋಗವು ಕೇಂದ್ರ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇಕಡ 14.27ರಷ್ಟು ಹೆಚ್ಚಳ ಸೇರಿದಂತೆ ಒಟ್ಟಾರೆ ಶೇಕಡ  23.5ರಷ್ಟು ಏರಿಕೆಗೆ ಶಿಫಾರಸು ಮಾಡಿತ್ತು.

2017ರ ಜನವರಿ 1ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಸುಮಾರು 58 ಲಕ್ಷ ಪಿಂಚಣಿದಾರರಿಗೆ ಹೊಸ ವೇತನ ವ್ಯವಸ್ಥೆಯ ಪ್ರಯೋಜನ ಸಿಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.