ADVERTISEMENT

ರಾಮಮಂದಿರ ಪ್ರಸಾದದ ಹೆಸರಿನಲ್ಲಿ ಸಿಹಿತಿಂಡಿಗಳ ಮಾರಾಟ; ಅಮೆಜಾನ್‌ಗೆ ನೋಟಿಸ್‌

ಪಿಟಿಐ
Published 20 ಜನವರಿ 2024, 5:55 IST
Last Updated 20 ಜನವರಿ 2024, 5:55 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ‘ಶ್ರೀರಾಮ ಮಂದಿರ ಅಯೋಧ್ಯ ಪ್ರಸಾದ’ ಹೆಸರಿನಲ್ಲಿ ಸಿಹಿತಿಂಡಿಗಳನ್ನು ತನ್ನ ವೇದಿಕೆಯಲ್ಲಿ ಮಾರಾಟ ಮಾಡಿದ ಸಂಬಂಧ ಇ-ಕಾಮರ್ಸ್ ದೈತ್ಯ ಅಮೆಜಾನ್ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ(ಸಿಸಿಪಿಎ) ನೋಟಿಸ್‌ ಜಾರಿ ಮಾಡಿದೆ.

ನೋಟಿಸ್ ನೀಡಿದ ಏಳು ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಅಮೆಜಾನ್‌ಗೆ ಸಿಸಿಪಿಎ ಸೂಚಿಸಿದೆ. ವಿಫಲವಾದಲ್ಲಿ ವೇದಿಕೆ ವಿರುದ್ಧ ಗ್ರಾಹಕ ಸಂರಕ್ಷಣಾ ಕಾಯ್ದೆ–2019ರ ನಿಬಂಧನೆಗಳಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಗ್ರಾಹಕರ ದಾರಿ ತಪ್ಪಿಸುವ ಕೆಲಸದಲ್ಲಿ ಅಮೆಜಾನ್‌ ತೊಡಗಿದ್ದು, ಶ್ರೀರಾಮಮಂದಿರ ಪ್ರಸಾದದ ಹೆಸರಿನಲ್ಲಿ ಸಿಹಿತಿಂಡಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಆರೋಪಿಸಿದ್ದು, ಇದರ ಆಧಾರದ ಮೇಲೆ ನೋಟಿಸ್‌ ಜಾರಿಗೊಳಿಸಲಾಗಿದೆ.

ADVERTISEMENT

ರಾಮಮಂದಿರ ಹೆಸರಿನಲ್ಲಿ ಅಮೆಜಾನ್‌ನಲ್ಲಿ ಮಾರಾಟ ಮಾಡಲು ಯತ್ನಿಸಿದ ಉತ್ಪನ್ನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶ್ರೀ ರಾಮಮಂದಿರ ಅಯೋಧ್ಯಾ ಪ್ರಸಾದ್ - ರಘುಪತಿ ತುಪ್ಪದ ಲಡ್ಡು, ಅಯೋಧ್ಯಾ ರಾಮಮಂದಿರ ಅಯೋಧ್ಯಾ ಪ್ರಸಾದ್, ಖೋಯಾ ಖೋಬಿ ಲಡ್ಡು, ರಾಮಮಂದಿರ ಅಯೋಧ್ಯಾ ಪ್ರಸಾದ್ - ದೇಸಿ ಹಸುವಿನ ಹಾಲಿನ ಪೇಡಾ ಇವುಗಳು ಪಟ್ಟಿಯಲ್ಲಿ ಸೇರಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.