ADVERTISEMENT

ಮಹದಾಯಿ ವಿಚಾರದಲ್ಲಿ ರಾಜಿ ಇಲ್ಲ: ಗೋವಾ ಸಿ.ಎಂ ಸಾವಂತ್

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 12:39 IST
Last Updated 30 ಜನವರಿ 2023, 12:39 IST
ಪ್ರಮೋದ್ ಸಾವಂತ್
ಪ್ರಮೋದ್ ಸಾವಂತ್   

ಪಣಜಿ: ಮಹದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ತಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಗೋವಾ ಸುಪ್ರೀಂ ಕೋರ್ಟ್‌ನಲ್ಲಿ ಬಲವಾದ ಕಾನೂನು ನಿಲುವು ಹೊಂದಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ನದಿ ನೀರಿನ ವಿವಾದ ಬಗೆಹರಿಸಲಾಗಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಗೋವಾದ ವಿರೋಧ ಪಕ್ಷಗಳು ಶನಿವಾರ ಸಾವಂತ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದವು.

ADVERTISEMENT

ಗೋವಾ ಮತ್ತು ನೆರೆಯ ಕರ್ನಾಟಕ ಹಲವಾರು ವರ್ಷಗಳಿಂದ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಗಳದಲ್ಲಿ ತೊಡಗಿವೆ. ಒಪ್ಪಂದಗಳನ್ನು ನಿರ್ಲಕ್ಷಿಸುವ ಮೂಲಕ ಕರ್ನಾಟಕ ಈ ವಿಷಯದಲ್ಲಿ ಏಕಪಕ್ಷೀಯವಾಗಿ ಮುಂದುವರಿಯುತ್ತಿದೆ ಎಂದು ಗೋವಾ ಆಗಾಗ್ಗೆ ಆರೋಪಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.