ADVERTISEMENT

Covid-19 India: ಏ.14ರ ನಂತರ‌ ಮೊದಲ ಬಾರಿ 2 ಲಕ್ಷಕ್ಕಿಂತ ಕಡಿಮೆ ಹೊಸ ಸೋಂಕಿತರು

1.96 ಲಕ್ಷ ಹೊಸ ಪ್ರಕರಣಗಳು, 3,511 ಮಂದಿ ಸಾವು

ಏಜೆನ್ಸೀಸ್
Published 25 ಮೇ 2021, 5:02 IST
Last Updated 25 ಮೇ 2021, 5:02 IST
ದೆಹಲಿಯ ಕೋವಿಡ್ ಆರೈಕೆ ಕೇಂದ್ರದಲ್ಲಿ ರೋಗಿಯೊಬ್ಬರು ಚಿಕಿತ್ಸೆ ಪಡೆಯುತ್ತಿರುವುದು
ದೆಹಲಿಯ ಕೋವಿಡ್ ಆರೈಕೆ ಕೇಂದ್ರದಲ್ಲಿ ರೋಗಿಯೊಬ್ಬರು ಚಿಕಿತ್ಸೆ ಪಡೆಯುತ್ತಿರುವುದು   

ನವದೆಹಲಿ: ದೇಶದಲ್ಲಿ ಏಪ್ರಿಲ್‌ 14ರ ನಂತರ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 2 ಲಕ್ಷಕ್ಕಿಂತ ಕಡಿಮೆ ದಾಖಲಾಗಿದೆ. ಮಂಗಳವಾರ 1,96,427 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 3,26,850 ಮಂದಿ ಗುಣಮುಖರಾಗಿದ್ದಾರೆ ಹಾಗೂ 3,511 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 2,69,48,874ಕ್ಕೆ ಏರಿಕೆಯಾಗಿದೆ. ಈ ಪೈಕಿ ಸೋಂಕಿನಿಂದ 2,40,54,861 ಮಂದಿ ಚೇತರಿಸಿಕೊಂಡಿದ್ದರೆ, 3,07,231 ಜನ ಮೃತಪಟ್ಟಿದ್ದಾರೆ. ಪ್ರಸ್ತುತ ದೇಶದಲ್ಲಿ 25,86,782 ಪ್ರಕರಣಗಳು ಸಕ್ರಿಯವಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.

ದೇಶದಾದ್ಯಂತ ಒಟ್ಟು 19,85,38,999 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ. ಮೇ 24ರಂದು 20,58,112 ಗಂಟಲು ದ್ರವ ಮಾದರಿಗಳಿಗೆ ಕೋವಿಡ್ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.