ADVERTISEMENT

ಒಂದು ಪಂದ್ಯದ ಸಂಭಾವನೆಯನ್ನು ಕೇರಳ ಸಂತ್ರಸ್ತರಿಗೆ ನೀಡಿದ ಟೀಂ ಇಂಡಿಯಾ ಆಟಗಾರರು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2018, 7:25 IST
Last Updated 23 ಆಗಸ್ಟ್ 2018, 7:25 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ನಾಟಿಂಗಂ: ಪ್ರವಾಹಕ್ಕೆ ಸಿಲುಕಿದ್ದ ಕೇರಳದ ಸಂತ್ರಸ್ತರಿಗೆ ಸಹಾಯ ಮಾಡಲು ಭಾರತ ಕ್ರಿಕೆಟ್‌ ತಂಡದ ಆಟಗಾರರು ನಿರ್ಧರಿಸಿದ್ದಾರೆ.

ಇಂಗ್ಲೆಂಡ್‌ನ ನಾಟಿಂಗಂನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಸಂಪೂರ್ಣ ಸಂಭಾವನೆಯನ್ನು ನೆರೆಸಂತ್ರಸ್ತರಿಗೆ ನೀಡಲಿದ್ದಾರೆ.

ಪಂದ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ‘ತಂಡದ ಗೆಲುವನ್ನು ಕೇರಳದ ಜನತೆಗೆ ಅರ್ಪಿಸುತ್ತೇವೆ’ ಎಂದು ಹೇಳಿದರು.

ADVERTISEMENT

11 ಮಂದಿ ಆಟಗಾರರ ತಂಡದಲ್ಲಿ ಸ್ಥಾನ ಪಡೆದವರಿಗೆ ಟೆಸ್ಟ್ ಪಂದ್ಯವೊಂದಕ್ಕೆ ₹ 15 ಲಕ್ಷ ಸಂಭಾವನೆ ನೀಡಲಾಗುತ್ತದೆ. ಹೀಗಾಗಿ ₹2 ಕೋಟಿ ಮೊತ್ತವನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗುತ್ತದೆ.

ಇಂಗ್ಲೆಂಡ್‌ ವಿರುದ್ಧ ನಡೆದ ಮೂರನೇ ಟೆಸ್ಟ್‌ ಪಂದ್ಯದಲ್ಲಿಭಾರತ 203 ರನ್‌ ಭರ್ಜರಿ ಜಯ ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.