ADVERTISEMENT

ಲಾಲು ಪ್ರಸಾದ್‌ ಆರೋಗ್ಯ ಕ್ಷೀಣ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2018, 18:59 IST
Last Updated 22 ಆಗಸ್ಟ್ 2018, 18:59 IST
ಲಾಲು ಪ್ರಸಾದ್
ಲಾಲು ಪ್ರಸಾದ್   

ಪಟ್ನಾ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಧ್ಯಕ್ಷ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಆರೋಗ್ಯ ಕ್ಷೀಣಿಸುತ್ತಿದ್ದು, ಅವರ ಕುಟುಂಬ ಆತಂಕದಲ್ಲಿದೆ.

ಜಾಮೀನಿನ ಮೇಲೆ ಹೊರಬಂದಿದ್ದ ಲಾಲು ಅವರು ಮುಂಬೈನ ಏಷ್ಯನ್‌ ಹಾರ್ಟ್‌ ಇನ್‌ಸ್ಟಿಟ್ಯೂಟ್‌ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳುತ್ತಿದ್ದರು. ಆದರೆ, ಮೂಲವ್ಯಾಧಿ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಕ್ಷೀಣಿಸಲಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT