ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕನೌಜ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಸಮಾಜವಾದಿ ಪಕ್ಷವು ಈ ಕ್ಷೇತ್ರಕ್ಕೆ ಸೋಮವಾರ ತೇಜ್ ಪ್ರತಾಪ್ ಯಾದವ್ ಅವರ ಹೆಸರನ್ನು ಘೋಷಿಸಿತ್ತು. ಆದರೆ ಬುಧವಾರ ತನ್ನ ನಿರ್ಧಾರ ಬದಲಿಸಿದೆ.
‘ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಕನೌಜ್ ಕ್ಷೇತ್ರದ ಅಭ್ಯರ್ಥಿಯಾಗಿ ಗುರುವಾರ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ಪಕ್ಷವು ‘ಎಕ್ಸ್’ ಖಾತೆಯಲ್ಲಿ ಪ್ರಕಟಿಸಿದೆ.
ಅಖಿಲೇಶ್ ಅವರು 2000ದಲ್ಲಿ ಕನೌಜ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಆಯ್ಕೆಯಾಗಿದ್ದರು. ಆ ಬಳಿಕ 2004 ಮತ್ತು 2009 ರಲ್ಲೂ ಗೆದ್ದಿದ್ದರು. 2012ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾದ ಬಳಿಕ ಈ ಕ್ಷೇತ್ರವನ್ನು ತ್ಯಜಿಸಿದ್ದರು. ಆ ವೇಳೆ ನಡೆದ ಉಪಚುನಾವಣೆಯಲ್ಲಿ ಅಖಿಲೇಶ್ ಪತ್ನಿ, ಡಿಂಪಲ್ ಯಾದವ್ ಅವಿರೋಧವಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಗೆದ್ದಿದ್ದ ಡಿಂಪಲ್, 2019ರ ಚುನಾವಣೆಯಲ್ಲಿ ಸೋತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.