ತಿರುವನಂತಪುರ: ಕೇರಳದಲ್ಲಿ ಬಿಸಿಲಿನ ತಾಪದಿಂದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
90 ವರ್ಷದ ವೃದ್ಧೆ ಮತ್ತು 53 ವರ್ಷದ ಪುರುಷರೊಬ್ಬರು ಬಿಸಿಲಿನ ತಾಪದಿಂದ ಭಾನುವಾರ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗರಿಷ್ಠ ತಾಪಮಾನವು 41.9 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 5.5 ಡಿಗ್ರಿ ಸೆಲ್ಸಿಯಸ್‌ನಷ್ಟು ಅಧಿಕವಾಗಿದೆ ಎಂದು ‘ದಿ ಹಿಂದೂ ಪತ್ರಿಕೆ’ ವರದಿ ಮಾಡಿದೆ.
ಬಿಸಿಲಿನ ತಾಪದಿಂದ ಈ ಸಾವು ಸಂಭವಿಸಿದೆಯೇ ಎಂದು ನಾವು ಇನ್ನೂ ಧೃಢೀಕರಿಸಿಲ್ಲ. ಮೃತದೇಹಗಳ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿ ಶೇಖರ್ ಕುರಿಯಾಕೋಸೆ ತಿಳಿಸಿದ್ದಾರೆ.
ಕೇರಳದಾದ್ಯಂತ ಬಿಸಿಲಿನ ತಾಪಮಾನವು ಸಾಮಾನ್ಯಕ್ಕಿಂತ ಏರಿಕೆಗೊಂಡಿದೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ವರ್ಷದ ಏಪ್ರಿಲ್‌ನಿಂದ ಜೂನ್ ನಡುವೆ ಸಾಮಾನ್ಯಕ್ಕಿಂತ ಅಧಿಕ ಬಿಸಿಗಾಳಿಯ ದಿನಗಳು ಇರಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.