ADVERTISEMENT

‘ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ’

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 19:30 IST
Last Updated 23 ಮಾರ್ಚ್ 2017, 19:30 IST
ಬೆಂಗಳೂರು: ‘ದಡಾರ, ರುಬೆಲ್ಲಾ ನಿರೋಧಕ ಲಸಿಕೆ ಕಾರ್ಯಕ್ರಮ ಅನುಷ್ಠಾನಕ್ಕೆ  ಅಡ್ಡಿಪಡಿಸಿದ ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಕೆ.ಆರ್‌. ರಮೇಶಕುಮಾರ್‌ ತಿಳಿಸಿದರು.
 
ವಿಧಾನಸಭೆಯಲ್ಲಿ ಬಿಜೆಪಿಯ ಸುನೀಲ್ ಕುಮಾರ್‌ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ರಾಜ್ಯದಲ್ಲಿ ಶೇ 95.26ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಕೆಲವು ವ್ಯಕ್ತಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸರ್ಕಾರದ ಆಜ್ಞೆ ಪಾಲಿಸಿಲ್ಲ. ಅಂತಹವರು ಎಷ್ಟೇ ಪ್ರಭಾವ ಶಾಲಿಯಾಗಿದ್ದರೂ ಕ್ರಮ ಕೈಗೊಳ್ಳದೇ ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.