ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಶುಕ್ರವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದರು.
ಸ್ನಾತಕೋತ್ತರ ಪದವಿ ಜೊತೆ ಎನ್ಇಟಿ, ಎಸ್ಎಲ್ಇಟಿ ಮತ್ತು ಪಿಎಚ್ಡಿ ಮಾಡಿರುವ ಉಪನ್ಯಾಸಕರಿಗೆ ತಿಂಗಳಿಗೆ ₹11,500ರಿಂದ ₹13,000ಕ್ಕೆ ಹಾಗೂ ಸ್ನಾತಕೋತ್ತರ ಪದವಿ ಪಡೆದವರಿಗೆ ₹9,500ರಿಂದ ₹11,000ಕ್ಕೆ ಏರಿಕೆ ಮಾಡಲಾಗಿದೆ. ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅತಿಥಿ ಉಪನ್ಯಾಸಕರಿಗೆ ₹8000ದಿಂದ ₹9,500ಕ್ಕೆ ಹೆಚ್ಚಿಸಲಾಗಿದೆ ಎಂದರು.
ಅಲ್ಲದೆ, ಪ್ರತಿಭಟನೆಯಲ್ಲಿ ತೊಡಗಿರುವ ಉಪನ್ಯಾಸಕರೊಂದಿಗೆ ಸಭೆ ನಡೆಸುವುದಾಗಿಯೂ ಸಚಿವರು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.