ADVERTISEMENT

ಅಧಿಕಾರಿಗಳ ಮನೆಯಲ್ಲಿ 3,000 ಆರ್ಡರ್ಲಿಗಳು !

​ಪ್ರಜಾವಾಣಿ ವಾರ್ತೆ
Published 29 ಜುಲೈ 2016, 19:30 IST
Last Updated 29 ಜುಲೈ 2016, 19:30 IST

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಅಧಿಕಾರಿಗಳ ಮನೆಯಲ್ಲಿ 3,000 ಆರ್ಡರ್ಲಿಗಳು ಕೆಲಸ ಮಾಡುತ್ತಿದ್ದಾರೆಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್‌ ಹೇಳಿದರು.

ಮಾಧ್ಯಮ ಗೋಷ್ಠಿಯಲ್ಲಿ ಶುಕ್ರವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಯಾವ ಜಿಲ್ಲೆಯಲ್ಲಿ ಎಷ್ಟು ಆರ್ಡರ್ಲಿಗಳು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ. ಆರು ತಿಂಗಳಲ್ಲಿ ಆರ್ಡರ್ಲಿ ವ್ಯವಸ್ಥೆ ತೆಗೆದುಹಾಕಿ, ಸರ್ಕಾರದ ಸೇವೆಗೆ ನಿಯೋಜಿಸುತ್ತೇನೆ’ ಎಂದರು. ಸಾರಿಗೆ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ 3,000 ಬಸ್‌ಗಳನ್ನು ಖರೀದಿಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಸಂಚಾರ ಸಮಸ್ಯೆಯನ್ನು ಪರಿಹರಿಸಲು ವಿವಿಧ ಯೋಜನೆ ರೂಪಿಸಲಾಗುತ್ತಿದೆ ಎಂದರು. ಬೆಳಗ್ಗೆ 2 ಗಂಟೆ ಹಾಗೂ ಸಂಜೆ ಎರಡು ಗಂಟೆಯ ವಾಹನ ದಟ್ಟಣೆ ಸಮಯದಲ್ಲಿ ಅಧಿಕಾರಿಗಳು ಮೇಲುಸ್ತುವಾರಿ ವಹಿಸಬೇಕು ಎಂದು ಆದೇಶಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.