ADVERTISEMENT

ಅನುದಾನಕ್ಕೆ ಒಳಪಡಿಸಲು ತಾತ್ವಿಕ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2017, 19:30 IST
Last Updated 23 ನವೆಂಬರ್ 2017, 19:30 IST

ಬೆಳಗಾವಿ: 1995ರವರೆಗೆ ಸ್ಥಾಪನೆಯಾಗಿರುವ ಖಾಸಗಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಸರ್ಕಾರ ತಾತ್ವಿಕವಾಗಿ ಒಪ್ಪಿದೆ. ಸದ್ಯದಲ್ಲಿಯೇ ಹಣಕಾಸು ಇಲಾಖೆಯ ಜೊತೆ ಚರ್ಚಿಸಿ, ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂ ನೌಕರರ ಒಕ್ಕೂಟದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಅನುದಾನ ಸಮಿತಿಯ ಮುಂದೆ ಈಗಾಗಲೇ ಚರ್ಚೆ ಮಾಡಲಾಗಿದೆ. 1987ರವರೆಗೆ ಸ್ಥಾಪನೆಯಾಗಿರುವ ಖಾಸಗಿ ಪದವಿ ಕಾಲೇಜುಗಳನ್ನು ಈಗಾಗಲೇ ಅನುದಾನಕ್ಕೆ ಒಳಪಡಿಸಲಾಗಿದೆ. ಆ ನಂತರ ಹಾಗೂ 1995ರ ಒಳಗೆ ಸ್ಥಾಪನೆಯಾಗಿರುವ ಸುಮಾರು 89 ಕಾಲೇಜುಗಳನ್ನು ಅನುದಾನ ವ್ಯಾಪ್ತಿಗೆ ತರಲಾಗುವುದು’ ಎಂದರು.

ADVERTISEMENT

ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಮಾತನಾಡಿ, 1995ರ ನಂತರ ಸ್ಥಾಪಿಸಿರುವ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.