ADVERTISEMENT

ಅಪ್ಪ- ಮಕ್ಕಳ ಆಟ ಅತಿರೇಕವಾಗಿದೆ: ಬಿ.ಎಸ್‌. ಯಡಿಯೂರಪ್ಪ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 25 ಮೇ 2018, 13:05 IST
Last Updated 25 ಮೇ 2018, 13:05 IST
ಸದನಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದರು. ಚಿತ್ತ: ಎಎನ್‌ಐ ಟ್ವೀಟ್‌
ಸದನಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದರು. ಚಿತ್ತ: ಎಎನ್‌ಐ ಟ್ವೀಟ್‌   

ಬೆಂಗಳೂರು: ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾನು ಸತ್ತು ಹೋಗುತ್ತೇನೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. 

ಶುಕ್ರವಾರ ಸಭಾಧ್ಯಕ್ಷರ ಆಯ್ಕೆ ಬಳಿಕ, ವಿಶ್ವಾಸಮತ ಯಾಚನೆ ಪ್ರಸ್ತಾಪ ಮಂಡಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಭಾಷಣದ ನಂತರ ಮಾತನಾಡಿದ ಯಡಿಯೂರಪ್ಪ, ‘ಅಪ್ಪ – ಮಕ್ಕಳ (ಎಚ್‌.ಡಿ.ದೇವೇಗೌಡ, ಕುಮಾರಸ್ವಾಮಿ, ರೇವಣ್ಣ) ಆಟ ಅತಿರೇಕವಾಗಿದೆ’ ಎಂದು ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಈ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ. ಹೋರಾಟ ಮುಂದುವರಿಸಿ ನ್ಯಾಯ ಒದಗಿಸುವುದು ನನ್ನ ಗುರಿಯಾಗಿದೆ ಎಂದರು.

ADVERTISEMENT

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಅವರು ಕೊಟ್ಟ ಮಾತಿನಂತೆ ಮುಂದಿನ 24 ಗಂಟೆಗಳೊಳಗೆ ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್‌ಗೆ ಕರೆ ಕೊಡುತ್ತೇವೆ ಎಂದು ಹೇಳಿದ ಯಡಿಯೂರಪ್ಪ ಅವರು ಕಲಾಪವನ್ನು ಬಹಿಷ್ಕರಿಸಿ, ಪಕ್ಷದ ಸದಸ್ಯರ ಜತೆಗೂಡಿ ಸದನದಿಂದ ಹೊರ ನಡೆದರು.

ಇದನ್ನೂ ಓದಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.