ADVERTISEMENT

ಆಮೂರರಿಗೆ ವಿಮರ್ಶಾ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2016, 19:44 IST
Last Updated 12 ಏಪ್ರಿಲ್ 2016, 19:44 IST
ಡಾ.ಜಿ.ಎಸ್‌. ಆಮೂರ
ಡಾ.ಜಿ.ಎಸ್‌. ಆಮೂರ   

ಧಾರವಾಡ: ಬೆಳಗಾವಿಯ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಪ್ರತಿಷ್ಠಾನವು ನೀಡುವ ಡಾ.ಬೆಟಗೇರಿ ಕೃಷ್ಣಶರ್ಮ ವಿಮರ್ಶಾ ಪ್ರಶಸ್ತಿಗೆ, ಪ್ರಸಕ್ತ ವರ್ಷ ಹಿರಿಯ ವಿಮರ್ಶಕ ಡಾ.ಜಿ.ಎಸ್‌. ಆಮೂರ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದ್ದು, ಇದೇ 16ರಂದು ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

‘ಕಥೆ, ಕಾದಂಬರಿ, ಜಾನಪದ ಸಂಶೋಧನೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ವಿಮರ್ಶಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಆಮೂರ ಈ ವರ್ಷ ಪ್ರಶಸ್ತಿಗೆ ಭಾಜನರಾಗಿದ್ದಾರೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ರಾಘವೇಂದ್ರ ಪಾಟೀಲ ಮಂಗಳವಾರ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.

‘ಹಿರಿಯ ಕವಿ, ಡಾ.ಚೆನ್ನವೀರ ಕಣವಿ ಅಧ್ಯಕ್ಷ ತೆಯ ಆಯ್ಕೆ ಸಮಿತಿ ಯಲ್ಲಿ ಎಚ್‌.ಎಸ್‌. ವೆಂಕಟೇಶಮೂರ್ತಿ ಹಾಗೂ ಪ್ರೊ.ಶಾಂತಾ ಇಮ್ರಾಪುರ ಇದ್ದರು’ ಎಂದು ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.