ADVERTISEMENT

ಆರ್‌ಎಸ್‌ಎಸ್‌ ನಾಯಕರು ವಿಶ್ವಾಸಕ್ಕೆ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 26 ಜೂನ್ 2016, 11:51 IST
Last Updated 26 ಜೂನ್ 2016, 11:51 IST
ಆರ್‌ಎಸ್‌ಎಸ್‌ ನಾಯಕರು ವಿಶ್ವಾಸಕ್ಕೆ: ಯಡಿಯೂರಪ್ಪ
ಆರ್‌ಎಸ್‌ಎಸ್‌ ನಾಯಕರು ವಿಶ್ವಾಸಕ್ಕೆ: ಯಡಿಯೂರಪ್ಪ   

ಬೆಂಗಳೂರು: ‘ಪಕ್ಷ ಸಂಘಟನೆಯ ವಿಷಯವನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿಯಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಯಲಹಂಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲಾ ಘಟಕಗಳಿಗೆ ಹೊಸ ಅಧ್ಯಕ್ಷರ ನೇಮಕ ಸಂಬಂಧ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅಸಮಾಧಾನಗೊಂಡಿದ್ದಾರೆ. ಅವರನ್ನು ಕರೆದು ಮಾತನಾಡುತ್ತೇನೆ’ ಎಂದರು.

ಹೊಸ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಒಟ್ಟಾಗಿ ಹೋಗುತ್ತೇವೆ ಎಂದು ಹೇಳಿದರು.

ಆಡಳಿತ ಯಂತ್ರ ಸ್ಥಗಿತ: ಸಂಪುಟ ಪುನರ್‌ರಚನೆ ಬಳಿಕ ರಾಜ್ಯದಲ್ಲಿ ಆಡಳಿತ ಯಂತ್ರ ಸ್ಥಗಿತಗೊಂಡಿದೆ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್‌ ದೂರಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್‌, ‘ಕಾಂಗ್ರೆಸ್‌ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಇದರಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಮಧ್ಯಂತರ ಚುನಾವಣೆ ಇವೆಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.