ADVERTISEMENT

ಇಬ್ರಾಹಿಂ ಅವಿರೋಧ ಆಯ್ಕೆ?

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2017, 19:30 IST
Last Updated 19 ಆಗಸ್ಟ್ 2017, 19:30 IST

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಅಗತ್ಯ ಸಂಖ್ಯೆಯಲ್ಲಿ ಸದಸ್ಯರು ಇಲ್ಲದಿರುವುದರಿಂದ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಿವೆ. ಹೀಗಾಗಿ ಇಬ್ರಾಹಿಂ ಹಾದಿ ಸುಗಮವಾಗಲಿದೆ.

ಬಿಜೆಪಿ ಸದಸ್ಯೆ ವಿಮಲಾ ಗೌಡ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದರ ಅವಧಿ 10 ತಿಂಗಳು ಮಾತ್ರ ಇದೆ.

ADVERTISEMENT

ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 21 ಕೊನೆ ದಿನ. 22ರಂದು ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು 24 ಕೊನೆ ದಿನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.