ADVERTISEMENT

ಈಶ್ವರಪ್ಪ ಪಿಎ ಅಪಹರಣ ಯತ್ನ; ರೌಡಿಶೀಟರ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2017, 20:32 IST
Last Updated 26 ಜುಲೈ 2017, 20:32 IST

ಬೆಂಗಳೂರು: ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ(ಪಿ.ಎ) ವಿನಯ್ ಅಪಹರಣ ಯತ್ನ, ಹಲ್ಲೆ ಪ್ರಕರಣ ಸಂಬಂಧ ರೌಡಿ ಅರವಿಂದ್‌ ಎಂಬಾತನನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

43ನೇ ಎಸಿಎಂಎಂ ನ್ಯಾಯಾಲಯದ ಬಾಡಿ ವಾರಂಟ್‌ ಪಡೆದಿದ್ದ ಮಹಾಲಕ್ಷ್ಮಿ ಲೇಔಟ್‌ ಠಾಣೆಯ ಪೊಲೀಸರು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ.

‘ಪ್ರಕರಣದಲ್ಲಿ ಅರವಿಂದ್‌ ಪಾತ್ರದ ಬಗ್ಗೆ ಅನುಮಾನವಿದೆ. ಹೀಗಾಗಿ ಆತನನ್ನು ವಶಕ್ಕೆ ಪಡೆದಿದ್ದೇವೆ. ಆತ ಹಲವು ಮಾಹಿತಿಯನ್ನು ಬಾಯ್ಬಿಟ್ಟಿದ್ದು, ಅದು ತನಿಖೆಗೆ ಸಹಾಯಕವಾಗಿದೆ’ ಎಂದು ಪೊಲೀಸ್‌ ಅಧಿಕಾರಿ ಹೇಳಿದರು.

‘ಇತ್ತೀಚೆಗೆ ಎಚ್‌ಎಎಲ್‌ ಠಾಣೆಯ ಪೊಲೀಸರು ಪ್ರಕರಣವೊಂದರ ಸಂಬಂಧ ಅರವಿಂದ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.