ADVERTISEMENT

ಎಲ್ಲರೂ ಒಗ್ಗಟ್ಟಾಗಿ ನಡೆಯಬೇಕೆಂಬ ಅಖಿಲ ಭಾರತ ವೀರಶೈವ ಮಹಾಸಭಾದ ನಿರ್ಣಯ ಸೂಕ್ತ: ಶಾಮನೂರು ಮಲ್ಲಿಕಾರ್ಜುನ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 7:39 IST
Last Updated 24 ಮಾರ್ಚ್ 2018, 7:39 IST

ಬಾಗಲಕೋಟೆ: ಎಲ್ಲರೂ ಒಗ್ಗಟ್ಟಾಗಿ ನಡೆಯಬೇಕೆಂಬ ಅಖಿಲ ಭಾರತ ವೀರಶೈವ ಮಹಾಸಭಾದ ನಿರ್ಣಯ ಸೂಕ್ತವಾಗಿದೆ ಎಂದು ತೋಟಗಾರಿಕೆ ಸಚಿವ ಶಾಮನೂರು ಮಲ್ಲಿಕಾರ್ಜುನ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತರಿಗೆ ಸಂಬಂಧವೇ ಇಲ್ಲ ಎಂದು ಸಚಿವ ಎಂ. ಬಿ. ಪಾಟೀಲ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.

ಒಂದು ಮನೆಯಲ್ಲಿ ಎಲ್ಲರೂ ಒಂದೇ ರೀತಿ ಇರುವುದಿಲ್ಲ. ಕೆಲವರು‌ ಮನೆ ಉದ್ಧಾರ ಮಾಡಿದರೆ, ಕೆಲವರು ಮನೆ ಹಾಳು ಮಾಡುವವರು ಇರುತ್ತಾರೆ ಎಂದು ಪರೋಕ್ಷವಾಗಿ ಎಂ. ಬಿ. ಪಾಟೀಲಗೆ ಕುಟುಕಿದ ಅವರು ಯಾರು ಮನೆ ಹಾಳು ಮಾಡುತ್ತಿದ್ದಾರೋ ಅವರ ಬಗ್ಗೆ ಮುಂದೆ ನೋಡೋಣ ಎಂದರು. 

ADVERTISEMENT

ಇನ್ನು ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹಿಂದೆ ಮನವಿ ಸಲ್ಲಿಸಲಾಗಿತ್ತು. ಅದು ತಿರಸ್ಕಾರವಾಗಿಲ್ಲ. ಹಾಗಾಗಿ ಕೇಂದ್ರಕ್ಕೆ ಮರುಪರಿಶೀಲನೆ ಮಾಡಲು ಕೋರಲಾಗುವುದು. ಈ ವಿಚಾರವನ್ನು ರಾಜಕಾರಣಕ್ಕೆ ಎಳೆದು ತರುವುದು ಬೇಡ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.