ADVERTISEMENT

ಕರಾವಳಿಯಲ್ಲಿ ಮಳೆ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2016, 19:48 IST
Last Updated 10 ಫೆಬ್ರುವರಿ 2016, 19:48 IST

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರೆದಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರೆದಿದೆ.

ಫೆ.11 ರಿಂದ 14 ರವರೆಗೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಫೆ.15 ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.