ADVERTISEMENT

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2015, 20:05 IST
Last Updated 28 ಜನವರಿ 2015, 20:05 IST

ಬೆಂಗಳೂರು: ವಿಧಾನಮಂಡಲ ಅಧಿವೇಶ­ನದಲ್ಲಿ ವಿರೋಧ ಪಕ್ಷಗಳನ್ನು ಎದುರಿ­ಸುವ ಕಾರ್ಯತಂತ್ರ ಕುರಿತು ಚರ್ಚಿಸಲು ಫೆಬ್ರುವರಿ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ವಿಧಾನಸೌಧದಲ್ಲಿ ಫೆ.4ರಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ  ಸಭೆ ನಿಗದಿಯಾಗಿದೆ. ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪವೂ ಸೇರಿದಂತೆ ವಿವಿಧ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಲು ಪ್ರತಿ­ಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.

ಈ ವಿಚಾರಗಳಲ್ಲಿ ಪ್ರತಿಪಕ್ಷಗಳನ್ನು ಎದುರಿ­ಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.