ADVERTISEMENT

ಕಾಶ್ಮೀರ ಕಣಿವೆಯಲ್ಲಿ ಲಘು ಭೂಕಂಪ

​ಪ್ರಜಾವಾಣಿ ವಾರ್ತೆ
Published 2 ಜುಲೈ 2015, 16:26 IST
Last Updated 2 ಜುಲೈ 2015, 16:26 IST

ಶ್ರೀನಗರ(ಪಿಟಿಐ):  ಕಾಶ್ಮೀರ ಕಣಿವೆಯಲ್ಲಿ ಗುರುವಾರ ಮಧ್ಯಾಹ್ನ 12.48 ಕ್ಕೆ  ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ. ಅದಾಗ್ಯೂ, ಯಾವುದೇ ಸಾವು–ನೋವಿನ ಬಗ್ಗೆ ವರದಿಯಾಗಿಲ್ಲ.

‘ಇಂದು(ಗುರುವಾರ) ಮಧ್ಯಾಹ್ನ 12.48ಕ್ಕೆ ಲಘು ತೀವ್ರತೆಯ ಕಂಪನ ಸಂಭವಿಸಿದೆ’ ಎಂದು ಹವಾಮಾನ ಇಲಾಖೆಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಅಲ್ಲದೇ, ಪಾಕಿಸ್ತಾನದ ಗಡಿ ಸಮೀಪದೆಲ್ಲೆಲ್ಲೋ 10 ಕಿಲೋ ಮೀಟರ್‌ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದೂ ಅವರು ತಿಳಿಸಿದ್ದಾರೆ.

ಆದರೆ, ಕಂಪನ ಸಂಬಂಧ ಯಾವುದೇ ಸಾವು–ನೋವುಗಳು ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಳೆದ ಮೂರು ದಿನಗಳ ಹಿಂದೆ ಅಂದರೆ ಜೂನ್ 30ರಂದು ಕೂಡ 5.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.