ADVERTISEMENT

ಕೆಎಂಎಫ್‌ ಸಭೆ: ತಡೆ ನೀಡಲು ನಕಾರ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 19:30 IST
Last Updated 23 ಮಾರ್ಚ್ 2017, 19:30 IST
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷರಾಗಿದ್ದ ಪಿ.ನಾಗರಾಜ  ರಾಜೀನಾಮೆ ಅಂಗೀಕಾರ ಕುರಿತು ಚರ್ಚಿಸಲು ಇದೇ 25ರಂದು ಕರೆದಿರುವ ಸಭೆಯ ನಡಾವಳಿಗಳು  ಕೋರ್ಟ್‌ ಆದೇಶಕ್ಕೆ ಒಳಪಡತಕ್ಕದ್ದು ಎಂದು ಹೈಕೋರ್ಟ್ ಹೇಳಿದೆ.
 
ಈ ಸಂಬಂಧ ನಾಗರಾಜ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೆ ಆದೇಶಿಸಿತು.
 
ಉದ್ದೇಶಿತ ಸಭೆಗೆ ತಡೆ ನೀಡುವಂತೆ ಕೋರಿದ ಅರ್ಜಿದಾರರ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಮೂರ್ತಿ, ‘ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡರೂ ಅದು  ಕೋರ್ಟ್‌ನ ಅಂತಿಮ ಆದೇಶಕ್ಕೆ ಬದ್ಧವಾಗಿರತಕ್ಕದ್ದು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.