ADVERTISEMENT

ಕೆಎಸ್‌ಒಯು ಮಾನ್ಯತೆ ಅರ್ಜಿ ಶೀಘ್ರ ಪರಿಗಣನೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 19:50 IST
Last Updated 23 ಏಪ್ರಿಲ್ 2018, 19:50 IST

ಬೆಂಗಳೂರು: ‘ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕೆಎಸ್‌ಒಯು) 2018–19ನೇ ಸಾಲಿಗೆ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಆದಷ್ಟು ಶೀಘ್ರ ಇತ್ಯರ್ಥಪಡಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

ಯುಜಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.‌

ಯುಜಿಸಿ ಪರ ವಕೀಲ ಕ್ಯಾಪ್ಟನ್‌ ಅರವಿಂದ ಶರ್ಮ, ‘ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾನ್ಯತೆ ಕೋರಿ ಕೆಎಸ್‌ಒಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ಮೆರಿಟ್ ಆಧಾರದ ಮೇಲೆ ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಶರ್ಮಾ, ‘ಈ ಬಗ್ಗೆ ವಿಶ್ವವಿದ್ಯಾಲಯ ಆತಂಕ ಪಡುವುದು ಬೇಡ. ಈ ಬಾರಿಗೆ ಸಲ್ಲಿಸಿರುವ ಅರ್ಜಿಯನ್ನು ಪ್ರತ್ಯೇಕವಾಗಿ ಪರಿಶೀಲಿಸಲಾಗುವುದು’ ಎಂದು ತಿಳಿಸಿದರು. ವಿಚಾರಣೆಯನ್ನು ಜೂನ್‌ 11ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.