ADVERTISEMENT

ಕೇದಾರ, ರಂಭಾಪುರಿ ಶ್ರೀಗಳ ವಿರುದ್ಧ ಬಸವದಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2015, 20:34 IST
Last Updated 30 ಜನವರಿ 2015, 20:34 IST

ಧಾರವಾಡ: ಲಿಂಗಾಯತ ಧರ್ಮ ಹಾಗೂ ಬಸವಣ್ಣ ಕುರಿತು ಕೇದಾರ ಪೀಠ ಹಾಗೂ ರಂಭಾಪುರಿ ಪೀಠದ ಸ್ವಾಮೀಜಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಮಹಾಸಭಾದ ಸದಸ್ಯರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ರ್‍ಯಾಲಿಗೆ ಕಲಾಭವನ ಬಳಿ ಬಸವಧರ್ಮ ಪೀಠದ ಮಾತೆ ಮಹಾದೇವಿ ಚಾಲನೆ ನೀಡಿದರು.
‘ಲಿಂಗಾಯತ ಧರ್ಮದ ಸಂಸ್ಥಾಪಕ ಬಸವಣ್ಣ ಹಾಗೂ ವಚನ ಸಾಹಿತ್ಯದ ಕುರಿತು ಪಂಚಪೀಠದ ಸ್ವಾಮೀಜಿಗಳು ಹೇಳಿಕೆ ನೀಡುತ್ತಿರುವುದು ಸರಿಯಲ್ಲ’ ಎಂದು ಮಾತೆ ಮಹಾದೇವಿ ಆಕ್ರೋಶ ವ್ಯಕ್ತಪಡಿಸಿದರು.

‘ವೀರಶೈವ ಮಹಾಸಭೆಯ ಕುಮ್ಮಕ್ಕಿ ನಿಂದ ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ಲಿಂಗಾಯತರಿಗೆ ವೀರಶೈವ ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡಲಾಗುತ್ತಿತ್ತು. ಲಿಂಗಾಯತರನ್ನು ವೀರಶೈವರನ್ನಾಗಿ ಮಾಡುವ ದುರುದ್ದೇಶದಿಂದ ಈ ಕೆಲಸ ನಡೆದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.