ADVERTISEMENT

ಕ್ರಿಕೆಟ್‌ ಬೆಟ್ಟಿಂಗ್‌ 10 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 3 ಮೇ 2016, 19:30 IST
Last Updated 3 ಮೇ 2016, 19:30 IST

ಗದಗ/ಧಾರವಾಡ:  ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ 10 ಮಂದಿಯನ್ನು   ಮಂಗಳವಾರ ಗದಗ ಹಾಗೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನಲ್ಲಿ ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ನಡೆದ ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಬಂಧಿಸಿರುವ ಗದಗ ಶಹರ ಠಾಣೆ ಪೊಲೀಸರು, ಆರು ಮೊಬೈಲ್‌ ಫೋನ್‌ಗಳು ಹಾಗೂ ₹ 4,500 ನಗದು ವಶಪಡಿಸಿ ಕೊಂಡಿದ್ದಾರೆ.

ಕಲಘಟಗಿ ತಾಲ್ಲೂಕಿನ ಬಿ.ಗುಡಿ ಹಾಳ ಗ್ರಾಮದಲ್ಲಿ ನಾಲ್ವರನ್ನು ಬಂಧಿಸಿ ರುವ ಪೊಲೀಸರು, ಎಂಟು ಮೊಬೈಲ್‌ ಫೋನ್‌ಗಳು, ಟಿ.ವಿ. ಹಾಗೂ ಲ್ಯಾಪ್‌ ಟಾಪ್‌ ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.