ADVERTISEMENT

ಗಡಿ ಪ್ರವೇಶಿಸದಂತೆ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2017, 20:08 IST
Last Updated 12 ನವೆಂಬರ್ 2017, 20:08 IST

ಬೆಳಗಾವಿ: ನಗರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯವರು ಆಚರಿಸಲು ಯೋಚಿಸಿರುವ ಮಹಾಮೇಳಾವ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಮಹಾರಾಷ್ಟ್ರದ ಶಾಸಕರು, ಜನಪ್ರತಿನಿಧಿಗಳಿಗೆ ಬೆಳಗಾವಿ ಗಡಿ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಎಸ್‌.ಜಿಯಾವುಲ್ಲಾ ಅವರು ಭಾನುವಾರ ರಾತ್ರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮಹಾಮೇಳಾವ್‌ದಲ್ಲಿ ಪಾಲ್ಗೊಂಡು ಗಡಿ ವಿಷಯ ಪ್ರಸ್ತಾಪಿಸುವುದು, ಸರ್ಕಾರ ವಿರುದ್ಧ ಘೋಷಣೆ ಕೂಗುವುದು,ಕನ್ನಡಿಗರ ಭಾಷಾ–ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಮತ್ತು ಸಾರ್ವಜನಿಕ ಆಸ್ತಿ–ಪಾಸ್ತಿಗಳಿಗೆ ಹಾನಿ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಶಾಸಕರಾದ ಧನಂಜಯ ಮುಂಡೆ, ಜಯಂತ ಪಾಟೀಲ ಹಾಗೂ ಕ್ಷೀರಸಾಗರ ಅವರನ್ನು ಮಹಾಮೇಳಾವ್‌ಕ್ಕೆ ಎಂಇಎಸ್‌ ಮುಖಂಡರು ಆಹ್ವಾನಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.