ADVERTISEMENT

‘ಗಳಗನಾಥ’, ‘ರಾಜಪುರೋಹಿತ’ ಪ್ರಶಸ್ತಿಗೆ ಮೊಗಸಾಲೆ, ಪಾಡಿಗಾರ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2016, 19:30 IST
Last Updated 25 ಅಕ್ಟೋಬರ್ 2016, 19:30 IST
‘ಗಳಗನಾಥ’, ‘ರಾಜಪುರೋಹಿತ’  ಪ್ರಶಸ್ತಿಗೆ ಮೊಗಸಾಲೆ, ಪಾಡಿಗಾರ
‘ಗಳಗನಾಥ’, ‘ರಾಜಪುರೋಹಿತ’ ಪ್ರಶಸ್ತಿಗೆ ಮೊಗಸಾಲೆ, ಪಾಡಿಗಾರ   

ಹಾವೇರಿ: ಶ್ರೀ ಗಳಗನಾಥ ಮತ್ತು ನಾ. ಶ್ರೀ ರಾಜಪುರೋಹಿತ ಪ್ರತಿಷ್ಠಾನದ ಈ ಸಾಲಿನ ‘ಶ್ರೀ ಗಳಗನಾಥ’ ಪ್ರಶಸ್ತಿಗೆ ಕಾರ್ಕಳ ತಾಲ್ಲೂಕಿನ ಕಾಂತಾವರದ ಡಾ. ನಾ. ಮೊಗಸಾಲೆ ಹಾಗೂ ‘ನಾ. ಶ್ರೀ. ರಾಜಪುರೋಹಿತ’ ಪ್ರಶಸ್ತಿಗೆ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀನಿವಾಸ ವಿ. ಪಾಡಿಗಾರ ಆಯ್ಕೆಯಾಗಿದ್ದಾರೆ.

‘ಪ್ರತಿಷ್ಠಾನವು ಇದೇ ಮೊದಲ ಬಾರಿ ಪ್ರಶಸ್ತಿ ನೀಡುತ್ತಿದೆ. ಈ ಪ್ರಶಸ್ತಿಗಳು ತಲಾ ₹ 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕನ್ನಡ ಸಾಹಿತ್ಯ, ಇತಿಹಾಸ ಮತ್ತು ಸಂಶೋಧನೆಯಲ್ಲಿ ಸಾಧನೆ ಮಾಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.

ನವೆಂಬರ್‌ 27 ರಂದು ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ದುಷ್ಯಂತ ನಾಡಗೌಡ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.