ADVERTISEMENT

ಗುಂಡ್ಲುಪೇಟೆ ಕ್ಷೇತ್ರ: ಕಾಂಗ್ರೆಸ್‌ನಿಂದ ಗೀತಾಗೆ ಟಿಕೆಟ್‌– ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2017, 13:14 IST
Last Updated 12 ಫೆಬ್ರುವರಿ 2017, 13:14 IST
ಗುಂಡ್ಲುಪೇಟೆ ಕ್ಷೇತ್ರ: ಕಾಂಗ್ರೆಸ್‌ನಿಂದ ಗೀತಾಗೆ ಟಿಕೆಟ್‌– ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಗುಂಡ್ಲುಪೇಟೆ ಕ್ಷೇತ್ರ: ಕಾಂಗ್ರೆಸ್‌ನಿಂದ ಗೀತಾಗೆ ಟಿಕೆಟ್‌– ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ   

ಚಾಮರಾಜನಗರ: ‘ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಎಚ್‌.ಎಸ್‌. ಮಹದೇವಪ್ರಸಾದ್‌ ಅವರ ಪತ್ನಿ ಡಾ.ಎಂ.ಸಿ. ಮೋಹನ್‌ಕುಮಾರಿ(ಗೀತಾ ಮಹದೇವಪ್ರಸಾದ್‌) ಅವರೇ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಾಲಹಳ್ಳಿಯಲ್ಲಿ ಭಾನುವಾರ ನಡೆದ ಮಹದೇವಪ್ರಸಾದ್‌ ಅವರ ಮಹಾಸ್ಮರಣೆ ಮತ್ತು ‘ಸೇವಾ ಪಥ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಕ್ಕೆ ಒಂದೇ ಬಾರಿಗೆ ಉಪ ಚುನಾವಣೆ ಘೋಷಣೆಯಾಗಲಿದೆ. ಮಹದೇವಪ್ರಸಾದ್‌ ಅವರ ಕನಸುಗಳನ್ನು ನನಸು ಮಾಡುವ ದೃಷ್ಟಿಯಿಂದ ಅವರ ಪತ್ನಿಯನ್ನೇ ಕಣಕ್ಕೆ ಇಳಿಸಲಾಗುವುದು. ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ಅಧಿಕೃತವಾಗಿ ಗೀತಾ ಅವರ ಹೆಸರನ್ನು ಘೋಷಿಸಲಾಗುವುದು ಎಂದರು.

ADVERTISEMENT

ಟೀಕೆ: ‘ಬಿ.ಎಸ್‌. ಯಡಿಯೂರಪ್ಪ ಅವರಿಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲಲು ಶಕ್ತಿ ಇಲ್ಲ. ಹಾಗಾಗಿ, ಗೊಂದಲದ ಹೇಳಿಕೆ ನೀಡಿ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.

ನಿರಂಜನ್‌ಕುಮಾರ್‌ ಸ್ಪರ್ಧೆ
ಮಹದೇವಪ್ರಸಾದ್‌ ವಿರುದ್ಧ 2 ಬಾರಿ ಸ್ಪರ್ಧಿಸಿ ಸೋತಿರುವ ಸಿ.ಎಸ್‌. ನಿರಂಜನ್‌ಕುಮಾರ್‌ ಅವರೇ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಈಗಾಗಲೇ, ಕಮಲ ಪಾಳಯದ ವರಿಷ್ಠರು ಗುಂಡ್ಲುಪೇಟೆ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ನಿರಂಜನ್‌ಕುಮಾರ್‌ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.