ADVERTISEMENT

ಗುಂಡ್ಲುಪೇಟೆ: ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2014, 19:30 IST
Last Updated 22 ಏಪ್ರಿಲ್ 2014, 19:30 IST
ಗುಂಡ್ಲುಪೇಟೆ ತಾಲ್ಲೂಕಿನ ಕುಂದುಕೆರೆ ಅರಣ್ಯ ವಲಯದ ಕುನ್ನ ಮುಂಟಿ ಗುಡ್ಡದಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ.
ಗುಂಡ್ಲುಪೇಟೆ ತಾಲ್ಲೂಕಿನ ಕುಂದುಕೆರೆ ಅರಣ್ಯ ವಲಯದ ಕುನ್ನ ಮುಂಟಿ ಗುಡ್ಡದಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ.   

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ  ಕುಂದಕೆರೆ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆಯ ಬೋನಿಗೆ 6 ವರ್ಷ ಪ್ರಾಯದ ಗಂಡು ಚಿರತೆ ಸೆರೆ ಸಿಕ್ಕಿದೆ.

ಏ.15ರಂದು ಕುನ್ನ ಮುಂಟಿ ಗುಡ್ಡದಲ್ಲಿ ಆಟವಾಡಲು ತೆರಳಿದ್ದ ಮೂವರು ಗಿರಿಜನ ಬಾಲಕರ ಮೇಲೆ ಚಿರತೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದರು.

ಅಪ್ಪು ಎಂಬ ಬಾಲಕ ಕಲ್ಲಿನಿಂದ ಚಿರತೆಯ ಮೇಲೆ ದಾಳಿ ನಡೆಸಿ ಸ್ನೇಹಿತರನ್ನು ಪಾರು ಮಾಡಿ ತಾನೂ ಪಾರಾಗಿದ್ದ. ಅದೇ ಚಿರತೆಯನ್ನು ಈಗ ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.