ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿದ್ದು, ನಾಲ್ಕನೆಯ ಮಹಡಿಯಲ್ಲಿದ್ದ ಪುಸ್ತಕಗಳೆಲ್ಲ ಸುಟ್ಟು ಕರಕಲಾಗಿವೆ.
ಮಧ್ಯರಾತ್ರಿಯಿಂದಲೆ ಬೆಂಕಿ ಹೊತ್ತಿಕೊಂಡಿದ್ದು ಬೆಳಿಗ್ಗೆ 8ಕ್ಕೆ ವಿಶ್ವವಿದ್ಯಾಲಯದ ಪೊಲೀಸ್ ಠಾಣೆ ಮೂಲಕ ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾ ಆರಂಭಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಘಟನೆಯಲ್ಲಿ ಸಂಶೋಧನಾ ಗ್ರಂಥಗಳು, ಸಂಗ್ರಹ ನಿಯತಕಾಲಿಕೆಗಳು ಹಾಗೂ ಪೀಠೋಪಕರಣಗಳು ಸುಟ್ಟಿವೆ.
ಗ್ರಂಥಾಲಯದ ಎಲ್ಲ ಮಹಡಿಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಮಂಗಳವಾರ ಮಧ್ಯರಾತ್ರಿಯಲ್ಲಿ ವ್ಯಕ್ತಿಯೊಬ್ಬ ಗ್ರಂಥಾಲಯದಲ್ಲಿ ಓಡಾಡಿದ ದೃಶ್ಯಗಳು ಸೆರೆಯಾಗಿವೆ. ಪೊಲೀಸರು ಈ ಎಲ್ಲವನ್ನು ಪರಿಶೀಲಿಸುತ್ತಿದ್ದಾರೆ ಎಂದು ವಿ.ವಿ.ಯ ಗ್ರಂಥಾಲಯದ ಸಿಬ್ಬಂದಿ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.