ADVERTISEMENT

ಗೋವಾ ಸರ್ಕಾರದ ವಿರುದ್ಧ ಆಯೋಗಕ್ಕೆ ದೂರು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2017, 19:30 IST
Last Updated 24 ಏಪ್ರಿಲ್ 2017, 19:30 IST

ಶಿವಮೊಗ್ಗ: ಗೋವಾದಲ್ಲಿ ಕಡಲ ತೀರದಲ್ಲಿ ನೆಲೆಸಿರುವ ಬಹುತೇಕ ಕನ್ನಡಿಗರು ಕೂಲಿ ಕಾರ್ಮಿಕರು. ಅವರನ್ನು ಒಕ್ಕಲೆಬ್ಬಿಸುವ ಅಲ್ಲಿನ ಸರ್ಕಾರದ ನಿರ್ಧಾರ ಖಂಡಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡ ಕಲ್ಯಾಣ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ ನಾಯ್ಕ ತಿಳಿಸಿದರು.

ಗೋವಾ ಸರ್ಕಾರದ ನಿರ್ಧಾರ ಖಂಡಿಸಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ತಮ್ಮ ನೇತೃತ್ವದಲ್ಲಿ ಗೋವಾಕ್ಕೆ ತೆರಳಿ ಒಕ್ಕೂಟ ವ್ಯವಸ್ಥೆಯ ಆಶಯ, ಗೋವಾ ಪ್ರವಾಸೋದ್ಯಮ ಅಭಿವೃದ್ಧಿಗೆ ಕನ್ನಡಿಗರ ಕೊಡುಗೆ ಮನವರಿಕೆ ಮಾಡಿಕೊಡಲಾಗುವುದು. ನಂತರ ದೆಹಲಿಗೆ ತೆರಳಿ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಆ ಪಕ್ಷದ ಸಂಸದರು ಅಲ್ಲಿನ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಬೇಕು. ಕೇಂದ್ರದ ಮೂಲಕ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.