ADVERTISEMENT

‘ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿ’

​ಪ್ರಜಾವಾಣಿ ವಾರ್ತೆ
Published 27 ಮೇ 2018, 19:30 IST
Last Updated 27 ಮೇ 2018, 19:30 IST
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭಾನ್ಕುಳಿ ಮಠದಲ್ಲಿ ನಡೆದ ‘ಗೋಸ್ವರ್ಗ‘ ಉದ್ಘಾಟನೆಯ ಸಂದರ್ಭದಲ್ಲಿ ಸಪ್ತ ಸನ್ನಿಧಿಗೆ ರಾಘವೇಶ್ವರ ಭಾರತೀ ಸ್ವಾಮೀಜಿ ಪವಿತ್ರ ಜಲವನ್ನು ಸುರಿದರು. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ಬಸವರಾಜ ಹೊರಟ್ಟಿ, ಕಲ್ಲಡ್ಕ ಪ್ರಭಾಕರ ಭಟ್ಟ ಇದ್ದಾರೆ

ಸಿದ್ದಾಪುರ: ದೇಶದ ಎಲ್ಲ ರಾಜ್ಯಗಳಲ್ಲಿಯೂ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಆಗ್ರಹಿಸಿದರು.

ತಾಲ್ಲೂಕಿನ ಭಾನ್ಕುಳಿ ಮಠದ ಆವರಣದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ‘ಗೋ ಸ್ವರ್ಗ‘ (ಗೋ ಶಾಲೆ) ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಗೋವನ್ನು ಗೌರವಿಸುವ ಮನೋಭಾವ ನಮ್ಮಲ್ಲಿ ಬೆಳೆಯಬೇಕು. ತಾಯಿ, ತಂದೆ, ಆಚಾರ್ಯ ಹಾಗೂ ಅತಿಥಿಯನ್ನು ದೇವರು ಎಂದು ಪರಿಭಾವಿಸುವ ಉಪನಿಷತ್ ವಾಕ್ಯದ ರೀತಿಯಲ್ಲಿ ಗೋವನ್ನೂ ದೇವರು ಎಂದು ಭಾವಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.