ADVERTISEMENT

ಗ್ರಾ ಪಂ: ಮತ ಎಣಿಕೆ ನಾಳೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2015, 19:30 IST
Last Updated 3 ಜೂನ್ 2015, 19:30 IST

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮತಗಳ ಎಣಿಕೆ ಶುಕ್ರವಾರ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ರಾಜ್ಯದ ಒಟ್ಟು 5,735 ಗ್ರಾಮ ಪಂಚಾಯಿತಿಗಳ  84,756 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಕಣದಲ್ಲಿದ್ದ  2,33,489 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. 

‘ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಶುಕ್ರವಾರ ಸಂಜೆ 5 ಗಂಟೆ ವೇಳೆಗೆ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಶೇ 82.54 ಮತದಾನ: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 15 ಜಿಲ್ಲೆಗಳಲ್ಲಿ ಮಂಗಳವಾರ ಶೇಕಡಾ 82.54 ಮತದಾನ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ (ಶೇ 89.38)  ಹಾಗೂ ಯಾದಗಿರಿ ಜಿಲ್ಲೆಯಲ್ಲಿ  ಕನಿಷ್ಠ (ಶೇ 73.62) ಮತದಾನ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.