ADVERTISEMENT

ಚನ್ನಗಿರಿ ಬಳಿ ಬಸ್ ಪಲ್ಟಿ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 29 ಮೇ 2015, 8:54 IST
Last Updated 29 ಮೇ 2015, 8:54 IST

ಚನ್ನಗಿರಿ(ದಾವಣಗೆರೆ ಜಿಲ್ಲೆ): ಪಟ್ಟಣದ ಹೊರ ವಲಯದಲ್ಲಿ ಚನ್ನಗಿರಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ವೊಂದು ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಶುಕ್ರವಾರ ಜರುಗಿದೆ.

ಖಾಸಗಿ ಬಸ್ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ. ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚನ್ನಗಿರಿ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT